ಕಾಶ್ಮೀರ, ಡಿ.20 (DaijiworldNews/HR): ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಇಬ್ಬರು ಸಹಚರರನ್ನು ಸೋಮವಾರ ಭದ್ರತಾ ಪಡೆ ಬಂಧಿಸಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಪೊಲೀಸರು, ಸಿಆರ್ ಪಿಎಫ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರರಿಗೆ ಆಶ್ರಯ, ಶಸ್ತ್ರಾಸ್ತ್ರ ಸರಬರಾಜು ಸೇರಿದಂತೆ ಇನ್ನಿತರ ರೀತಿಯಲ್ಲಿ ನೆರವು ನೀಡಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಇನ್ನು ಇಬ್ಬರೂ ಕೂಡಾ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಕಮಾಂಡರ್ ಗಳ ಜತೆ ಸಂಪರ್ಕದಲ್ಲಿದ್ದು, ಅವರ ಸೂಚನೆಯಂತೆ ಜಮ್ಮು, ಕಾಶ್ಮೀರದಲ್ಲಿ ಉಗ್ರರಿಗೆ ಬೇಕಾದ ನೆರವು ನೀಡುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.