ಬೆಳಗಾವಿ, ಡಿ.20 (DaijiworldNews/SM): ತೀವ್ರ ವಿರೋಧದ ನಡುವೆಯೇ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸರಕಾರ ಮುಂದಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಸಮ್ಮತಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಂಪುಟ ಸಭೆ ನಡೆಸಲಾಗಿದ್ದು, ಇದರಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಯ ಬಗ್ಗೆ ಚರ್ಚಿಸಿ ಸದನದಲ್ಲಿ ಮಂಡಿಸಲು ಒಪ್ಪಿಗೆ ನೀಡಲಾಯಿತು.
ಬಹುತೇಕ ಮಂಗಳವಾರದಂದು ಮಸೂದೆ ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಆದರೆ, ವಿರೋಧ ಪಕ್ಷ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಎಲ್ಲರ ಚಿತ್ತ ಮಸೂದೆಯತ್ತ ನೆಟ್ಟಿದೆ.