ಬೆಳಗಾವಿ, ಡಿ 22 (DaijiworldNews/MS): ಇಲ್ಲಿನ ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಎಂದು ಗುರುತಿಸಲಾಗಿದೆ. ಸೋಮವಾರದಂದು ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಕನ್ನಡ ಬಾವುಟ ಸುಟ್ಟಿದ್ದರಲ್ಲದೆ, ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಮಸಿ ಬಳಿದಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ನಂದಗಡ ಠಾಣೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು ಇದೀಗ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.