ಬೆಳಗಾವಿ, ಡಿ.21 (DaijiworldNews/HR): ಮತಾಂತರ ನಿಷೇಧ ಕಾಯ್ದೆ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆಯಾಗಿದ್ದು, ಬಲವಂತವಾಗಿ ಎಲ್ಲಿಯೂ ಮತಾಂತರವಾಗಿಲ್ಲ. ಹಾಗಾಗಿ ನಾವು ಇದನ್ನು ವಿರೋಧ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಅಶಾಂತಿ ಮೂಡಿಸಲು ಸರ್ಕಾರದವರು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿದ್ದು, ಇದರಿಂದ ಎಲ್ಲರಿಗೂ ಕಸಿವಿಸಿಯಾಗುತ್ತಿದೆ. ಮಾನಸಿಕವಾಗಿ ಹಿಂಸೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕಾನೂನು ಮಾಡುವುದು ಸರಿಯಲ್ಲ" ಎಂದರು.
ಇನ್ನು ಮತಾಂತರ ನಿಷೇಧ ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದ್ದು, ಮಂಗಳವಾರವೇ ವಿಧಾನಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021 ಅನ್ನು ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದೆ.