ಬೆಳಗಾವಿ, ಡಿ.21 (DaijiworldNews/HR): ಮತಾಂತರ ನಿಷೇಧ ಕಾಯ್ದೆ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನು ಜಾರಿಗೆ ತರಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಮಸೂದೆಗೆ ನಮ್ಮ ವಿರೋಧವಿದ್ದು, ಮತಾಂತರ ತಡೆ ವಿಧೇಯಕ ತರುವ ಮುನ್ನ ವಿದೇಶದಲ್ಲಿರುವ ಕನ್ನಡಿಗರ ಬಗ್ಗೆಯೂ ಸರ್ಕಾರ ಯೋಚಿಸಬೇಕು. ಇಂತಹ ಕಾಯ್ದೆಯನ್ನು ಜಾರಿಗೆ ತಂದರೆ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ನೆಮ್ಮದಿಯಾಗಿರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಈ ಕಾಯ್ದೆಯನ್ನು ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿರಿಸಿಕೊಂಡು ತರುತ್ತಿದ್ದಾರೆ. ಬಿಜೆಪಿಯವರು ತಮ್ಮ ಮಕ್ಕಳನ್ನು ಕ್ರಿಶ್ಚಿಯನ್ ಶಾಲೆಗಳಲ್ಲಿ ಓದಿಸುತ್ತಾರೆ. ಅವರ ವಿರುದ್ಧವೇ ಕಾನೂನು ತರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಕೇಳಿದ್ದಾರೆ.