ಬೆಳಗಾವಿ, ಡಿ 21 (DaijiworldNews/MS): "ಕೊರೊನಾ ವೈರಸ್ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗುತ್ತಿದ್ದು ಆದರೆ ಬಹಿರಂಗವಾಗಿ ಹೊಸ ವರ್ಷ ಆಚರಣೆಗೆ ಹಾಗೂ ರಾಜ್ಯಾದ್ಯಂತ ಬಾರ್, ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, " ಡಿಸೆಂಬರ್ 30 ರಿಂದ ಜನವರಿ 2ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿಇರಲಿದೆ. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್ಮಸ್ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧಗಳು ಇಲ್ಲ "ಎಂದು ಅವರು ಸ್ಪಷ್ಟಪಡಿಸಿದ್ದಾರೆ
"ಈಗಿನ ಪರಿಸ್ಥಿತಿ ಅನುಸಾರ ತಜ್ಞರ ಶಿಫಾರಸ್ಸಿನಂತೆ , ಶೇ.50ರ ಮಿತಿಯನ್ನು ಜಾರಿಗೊಳಿಸಲಾಗಿದೆ ಬಹಿರಂಗವಾಗಿ ಜನರು ಗುಂಪುಗೂಡಲು ನಿರ್ಬಂಧಿಸಲಾಗಿದೆ. ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಡಿಜೆ ಸೇರಿ ಅಪಾರ್ಮೆಂಟ್ ಗಳಲ್ಲೂ ಡಿಜೆಗೆ ಅವಕಾಶ ಇಲ್ಲ" ಎಂದು ಹೇಳಿದ್ದಾರೆ.
"ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುತ್ತದೆ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದುದಾಗಿದೆ" ಎಂದು ಹೇಳಿದರು.
ಕ್ರಿಸ್ ಮಸ್ ಸಂದರ್ಭದಲ್ಲಿ ಕೊರೋನಾ ಮುಂಜಾಗ್ರತಾ ಕ್ರಮದೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಬೇಕು ಎಂದು ಇದೇ ವೇಳೆ ಸಿಎಂ ಮನವಿ ಮಾಡಿದರು.