ಬೆಳಗಾವಿ, ಡಿ.21 (DaijiworldNews/HR): ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಮಸೂದೆಯನ್ನು ರಾಜ್ಯ ಸರ್ಕಾರ ಮಂಡಿಸಿದ್ದು, ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.
ಭೋಜನ ವಿರಾಮದ ಬಳಿಕ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮತಾಂತರ ನಿಷೇಧ ವಿಧೇಯಕ ಮಂಡಿಸಿದ್ದು, ಏಕಾಏಕಿ ಮಸೂದೆ ಮಂಡನೆ ಮಾಡಿದ ಸರ್ಕಾರದ ಕ್ರಮಕ್ಕೆ ವಿಪಕ್ಷಗಳು ಗದ್ದಲ ನಡೆಸಿದ್ದಾರೆ.
ಇನ್ನು ಈ ರೀತಿ ಕದ್ದು ಮುಚ್ಚಿಯಾಗಿ ಮಸೂದೆ ಮಂಡನೆ ಮಾಡುತ್ತಿರುವುದರ ಉದ್ದೇಶವೇನು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದು,ಡಿಕೆಶಿ ಮಾತಿಗೆ ಧ್ವನಿಗೂಡಿಸಿದ ವಿಪಕ್ಷ ಸದಸ್ಯರು ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕದ್ದು ಮುಚ್ಚಿ ಪದ ವಾಪಸ್ ಪಡೆಯುವಂತೆ ಸೂಚಿಸಿದ್ದು, ಮತಾಂತರ ನಿಷೇಧ ಮಸೂದೆ ಮಂಡನೆಯಷ್ಟೇ ಮಾಡಲಾಗಿದೆ. ಈ ಬಗ್ಗೆ ಚರ್ಚೆಗೆ ನಾಳೆ ಸದನದಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.