ಬೆಳಗಾವಿ, ಡಿ. 21 (DaijiworldNews/HR): ಬೆಳಗಾವಿಯಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ವಿಜೇತರಾದ ಮಂಜುನಾಥ್ ಭಂಡಾರಿ ಅವರನ್ನು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಮಂಜುನಾಥ್ ಭಂಡಾರಿ ಅವರು ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ್ದರು.
ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಗೆಲುವು ಸಾಧಿಸಿದ್ದರು.