ಬೆಳಗಾವಿ, ಡಿ.22 (DaijiworldNews/HR): ಕರ್ನಾಟಕದಲ್ಲಿ 2018 ರಿಂದ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಯು.ಬಿ. ವೆಂಕಟೇಶ್ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನು 2018ರಿಂದ ಇಲ್ಲಿಯವರೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಆರೋಪದಡಿ 7,301 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ 915 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.