ಲಖನೌ, ಡಿ.22 (DaijiworldNews/HR): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆಗಳು ಹ್ಯಾಕ್ ಆಗಿದೆ ಎಂದು ಆರೋಪಿಸಿದ ಬೆನ್ನಲ್ಲೇ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವಾಲಯ ತನಿಖೆಗೆ ಆದೇಶಿಸಿದೆ ಎಂದು ತಿಳಿದು ಬಂದಿದೆ.
ಪ್ರಿಯಾಂಕಾ ಗಾಂಧಿಯವರು ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆಗಳನ್ನು ರಾಜ್ಯ ಸರ್ಕಾರ ಹ್ಯಾಕ್ ಮಾಡಿದೆ ಎಂದು ಆರೋಪಿಸಿದ್ದರು. ಆದರೆ ಈ ಬಗ್ಗೆ ಇದುವರೆಗೆ ಪ್ರಿಯಾಂಕಾ ಅವರು ಯಾವುದೇ ದೂರು ದಾಖಲಿಸಿಲ್ಲ.
ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ಫೋನ್ ಕದ್ದಾಲಿಕೆ ಆರೋಪ-ಪ್ರತ್ಯಾರೋಪಗಳು ಸಾಕಷ್ಟು ಚರ್ಚೆಗೆ ಕಾರಣವಾಗಿವೆ. ಈ ನಡುವೆ ನನ್ನ ಮಕ್ಕಳ ಇನ್ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದರು.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಈ ಹಿಂದೆ ಉತ್ತರ ಪ್ರದೇಶ ಸರ್ಕಾರ ತಮ್ಮ ಫೋನ್ ಅನ್ನು ಟ್ಯಾಪ್ ಮಾಡುತ್ತಿದ್ದು, ಪ್ರತಿ ದಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೆಕಾರ್ಡಿಂಗ್ ಗಳನ್ನು ಕೇಳುತ್ತಾರೆ ಎಂದು ಆರೋಪಿಸಿದ್ದರು.
ಹೀಗಾಗಿ ಯೋಗಿ ವಿರುದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ದೂರವಾಣಿ ಕದ್ದಾಲಿಕೆ ಆರೋಪ ನಡೆಸಿದ ಸಮಯದಲ್ಲೇ ಪ್ರಿಯಾಂಕಾ ಗಾಂಧಿ ಈ ಹೇಳಿಕೆ ಮಹತ್ವ ಪಡೆದಿದೆ.