ನವದೆಹಲಿ, ಡಿ.22 (DaijiworldNews/HR): ಕೊರೊನಾ ಸೋಂಕಿನ ಮೂರನೇ ಅಲೆ ಬಾರದಂತೆ ತಡೆಯಲು ದೇಶದ ಜನತೆಗೆ ಬೂಸ್ಟರ್ ಡೋಸ್ನ ಅಗತ್ಯವಿದ್ದು, ಸರ್ಕಾರ ನೀಡುವುದು ಯಾವಾಗ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿನ ಮೂರನೇ ಅಲೆ ತಡೆಗಟ್ಟುವ ಹಿನ್ನಲೆಯಲ್ಲಿ ಡಿಸೆಂಬರ್ ಅಂತ್ಯದ ವೇಳೆಗೆ ಶೇ.60 ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡಬೇಕಿತ್ತು, ಆದರೆ ಕೇವಲ ಶೇ. 42 ರಷ್ಟು ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನು ಕೊರೊನಾದ ಮೂರನೇ ಅಲೆ ವಿರುದ್ಧ ಹೋರಾಡಲು ಡಿಸೆಂಬರ್ 2021ರ ವೇಳೆಗೆ ದೇಶದ ಶೇ. 60 ರಷ್ಚು ಜನರಿಗೆ ಲಸಿಕೆ ನೀಡಬೇಕಿತ್ತು, ಆದರೆ ಆಗಲಿಲ್ಲ, ಪ್ರತಿದಿನ ಲಸಿಕೆ ಕೊರತೆ ಎದುರಾಗುತ್ತಿದೆ ಎಂದು ದೂರಿದ್ದಾರೆ.