ಬೆಂಗಳೂರು, ಡಿ.22 (DaijiworldNews/SM): ರಾಜ್ಯದಲ್ಲಿ ಓಮೈಕ್ರಾನ್ ಸೋಂಕು ಪತ್ತೆಯಾಗುತ್ತಿದ್ದು ಸರಕಾರ ಎಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಆದರೆ, ಆತಂಕ ಪಡುವ ಅಗತ್ಯವಿಲ್ಲ ಎಚ್ಚರಿಕೆಯಿಂದ ಇರಬೇಕೆಂದು ಸರಕಾರ, ಆರೋಗ್ಯ ಇಲಾಖೆ ಹೇಳಿದೆ.
ಓಮೈಕ್ರಾನ್ ಸೋಂಕು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲವು ನಿಯಂತ್ರಣಗಳನ್ನು ಸರಕಾರ ಜಾರಿಗೆ ತಂದಿದೆ. ಸೋಂಕಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಬದಲಾಗಿ ಸೋಂಕಿನ ಬಗ್ಗೆ ಎಚ್ಚರಿಕೆವಹಿಸುವುದು ಅಗತ್ಯವೆಂದು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.
ಓಮೈಕ್ರಾನ್ ನಿಂದ ಗಂಭೀರ ಸ್ವರೂಪ ತಲುಪಿದ ಬಗ್ಗೆ ಉಲ್ಲೇಖಗಳಿಲ್ಲ. ಮತ್ತೊಂದೆಡೆ ಸಂಪರ್ಕಿತರಲ್ಲೂ ಸೋಂಕು ಪತ್ತೆಯಾಗುತ್ತಿಲ್ಲ. ರಾಜ್ಯದಲ್ಲಿ ಸದ್ಯ ಗಮನಿಸಿದಾಗ ಗಂಭೀರ ಸ್ವರೂಪ ಇಲ್ಲ
ಆದರೆ, ಸೋಂಕು ಹೊಸದಾಗಿರುವ ಹಿನ್ನೆಲೆ ಎಚ್ಚರ ವಹಿಸುವುದು ಅಗತ್ಯ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.