ಲೂಧಿಯಾನಾ, ಡಿ 23 (DaijiworldNews/MS): ಪಂಜಾಬ್ ನ ಲೂಧಿಯಾನಾ ನ್ಯಾಯಾಲಯದ ಸಂಕೀರ್ಣದಲ್ಲಿ ಸಂಭವಿಸಿದ ಏಕಾಏಕಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯಲ್ಲಿ ಜಿಲ್ಲಾ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದ್ದ ವೇಳೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ನಾಲ್ವರಿಗೆ ಗಂಭೀರಗಾಯಗಳಾಗಿದ್ದು, ಇತರರು ಭಯಭೀತರಾಗಿದ್ದಾರೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಆ ಪ್ರದೇಶದಲ್ಲಿ ಸುತ್ತುವರಿದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಪರಿಸ್ಥಿತಿಯನ್ನು ಅವಲೋಕಿಸಲು ಲುಧಿಯಾನಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ಘಟನೆಗೆ ಸಂತಾಪ ಸೂಚಿಸಿದ್ದಾರೆ.