ಮೈಸೂರು, ಡಿ 24 (DaijiworldNews/MS): ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಹಾಗೂ ಜೆಡಿಎಸ್ ಜಿಲ್ಲಾ ಖಜಾಂಚಿ ಬೆಳವಾಡಿ ಪ್ರದೀಪ್ (32) ಮರಟಿಕ್ಯಾತನಹಳ್ಳಿ ಸಮೀಪದ ಅಪಾರ್ಟ್ ಮೆಂಟ್ ನಲ್ಲಿ ಗುರುವಾರ ತಡರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳವಾಡಿ ಶಿವಮೂರ್ತಿ ಅವರು ಜಿಲ್ಲಾ ಜೆಡಿಎಸ್ನ ಖಜಾಂಚಿ ಆಗಿದ್ದಾರೆ. ಪ್ರದೀಪ್ ತಾಯಿ ಭಾಗ್ಯ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ. ತಮ್ಮ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಕ್ಕೆ ಬಹುದೊಡ್ಡ ಆಘಾತ ನೀಡಿದೆ.
ಪ್ರದೀಪ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಇಲವಾಲ ಠಾಣೆ ಪೋಲಿಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.