ಬೆಳಗಾವಿ, ಡಿ.24 (DaijiworldNews/PY): "ಕಾಂಗ್ರೆಸ್ ಸೇರುವ ಕುರಿತು ಯೋಚಿಸಿಲ್ಲ. ಸದ್ಯ ಬಿಜೆಪಿಯಲ್ಲಿ ಇದ್ದೇನೆ" ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, "ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಮಯ ಇದೆ. ಕಾಂಗ್ರೆಸ್ ಸೇರುವ ಕುರಿತು ಯೋಚಿಸಿಲ್ಲ. ಸದ್ಯ ಬಿಜೆಪಿಯಲ್ಲಿದ್ದೇನೆ" ಎಂದಿದ್ದಾರೆ.
ಕಾಂಗ್ರೆಸ್ಗೆ ವಾಪಾಸ್ಸಾಗುವ ವದಂತಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಮ್ಮ ಹಳೆಯ ಸ್ನೇಹಿತರು. ರಾಜಕೀಯವೇ ಬೇರೆ, ಸ್ನೇಹವೇ ಬೇರೆ. ಕೆಲವೊಂದು ಬಾರಿ ಮುಖಾಮುಖಿಯಾದಾಗ ಕುಶಲೋಪರಿ ಮಾತನಾಡುತ್ತೇವೆ. ಸದ್ಯ ನಾನು ಬಿಜೆಪಿ ತ್ಯಜಿಸಿ ಕಾಂಗ್ರೆಸ್ಗೆ ವಾಪಾಸ್ಸಾಗುವುದಿಲ್ಲ" ಎಂದು ಹೇಳಿದ್ದಾರೆ.
ನಾಯಕತ್ವ ಬದಲಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು," ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬದಲಾವಣೆ ಆಗುವುದಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ. ಈಗಾಗಲೇ ಇದನ್ನು ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ" ಎಂದಿದ್ದಾರೆ.