ಬೆಂಗಳೂರು, ಡಿ.24 (DaijiworldNews/PY): 2022ರಲ್ಲಿ ಕಾಂಗ್ರೆಸ್ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದು, ಮುಂದಿನ ಚುನಾವಣೆಯ ವೇಳಾಪಟ್ಟಿ ಹೊರಬಿದ್ದಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸುಮಾರು ಐದು ಗಂಟೆಗಳ ನಡೆಸಿದ ಸುದೀರ್ಘ ಸಭೆಯಲ್ಲಿ, ರಾಜಸ್ತಾನದ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಭೂಪೇಶ್ ಬಘೇಲ್ ಹಾಗೂ ಪಂಜಾಬ್ನ ಚರಣಜಿತ್ ಸಿಂಗ್ ಚನ್ನಿ ಸೇರಿದಂತೆ ವಿವಿಧ ನಾಯಕರು ಒತ್ತಾಯಿಸಿದ್ದು, ರಾಹುಲ್ ಗಾಂಧಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ರಾಹುಲ್ ಗಾಂಧಿ ಅವರಿಗೆ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಹಲವು ಬಾರಿ ಮನವಿ ಮಾಡಿದರೂ ಅವರು ಹಿಂದೇಟು ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಅಂಬಿಕಾ ಸೋನಿ ಮಾತನಾಡಿ, ''ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಎಲ್ಲ ಸದಸ್ಯರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದಿದ್ದಾರೆ.
ತಮ್ಮ ಮೇಲೆ ನಂಬಿಕೆ ಇಟ್ಟಿದ್ದಾಕ್ಕಾಗಿ ಎಲ್ಲಾ ನಾಯಕರಿಗೂ ಧನ್ಯವಾದಗಳನ್ನು ಅರ್ಪಿಸಿದರು ಹಾಗೂ ಅವರ ಕೋರಿಕೆಯ ಮೇರೆಗೆ ತಮ್ಮ ಮನಸ್ಸನ್ನು ಅನ್ವಯಿಸುವುದಾಗಿ ಹೇಳಿದರು ಎಂದು ಮೂಲಗಳು ಹೇಳಿವೆ.
"ಮುಂದಿನ ಸೆಪ್ಟೆಂಬರ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಸಿಡಬ್ಲ್ಯೂಸಿ ತೀರ್ಮಾನಿಸಿದೆ" ಎಂದು ಸಿಡಬ್ಲ್ಯೂಸಿ ಸದಸ್ಯರು ತಿಳಿಸಿದ್ದಾರೆ.
"ದೇಶದ ರಾಜಕೀಯ ಪರಿಸ್ಥಿತಿಯ ಒಂದು ತೀರ್ಮಾನ ಸೇರಿದಂತೆ ಮೂರು ನಿರ್ಧಾರಗಳನ್ನು ಸಿಡಬ್ಲ್ಯೂಸಿ ಅಂಗೀಕರಿಸಿದೆ" ಎಂದಿದ್ಧಾರೆ.
ಮಂಧ್ಯತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು.
ಸಿಡಬ್ಲ್ಯೂಸಿ ಸಭೆಯಲ್ಲಿ ತನ್ನ ಆರಂಭಿಕ ಮಾತುಗಳಲ್ಲಿ, ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ, "ಪೂರ್ಣಾವಧಿ ಹಾಗೂ ಪಕ್ಷದ ಅಧ್ಯಕ್ಷರಾಗಿ ಹಾಗೂ ನಾಯಕರೊಂದಿಗೆ ಮಾತನಾಡುವ ಅವಶ್ಯಕತೆ ಇಲ್ಲ" ಎಂದಿದ್ದಾರೆ.
"ಪೂರ್ಣ ಪ್ರಮಾಣದ ಸಾಂಸ್ಥಿಕ ಚುನಾವಣೆಗಳ ವೇಳಾಪಟ್ಟಿಯನ್ನು ಸಿಡಬ್ಲ್ಯೂಸಿ ಸದಸ್ಯರ ಮುಂದೆ ಇಡಲಾಗಿದೆ" ಎಂದು ತಿಳಿಸಿದ್ದಾರೆ.