ಮಡಿಕೇರಿ, ಡಿ. 24 (DaijiworldNews/HR): ಕರ್ನಾಟಕದಲ್ಲಿ ಬದಲಾವಣೆ ಗಾಳಿ ಆರಂಭವಾಗಿದ್ದು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಲಿದೆ. ಅದಕ್ಕೆ ಸಾಕ್ಷಿ ವಿಧಾನ ಪರಿಷತ್ ಚುನಾವಣೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಬಿಜೆಪಿ ಅಧಿಕೃತ ಅಭ್ಯರ್ಥಿಯೇ ಬೆಳಗಾವಿಯಲ್ಲಿ ಸೋತಿದ್ದಾರೆ. ಕೊಡಗು ಸೇರಿದಂತೆ ಕೆಲವು ಕ್ಷೇತ್ರ ಕಡಿಮೆ ಅಂತರದ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ. ಎಲ್ಲಾ ಕಡೆಯೂ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಬಲ ಹೋರಾಟ ನೀಡಿದ್ದಾರೆ" ಎಂದರು.
ಇನ್ನು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಸುಮ್ಮನೆ ಹೇಳಿಕೆ ನೀಡಬಾರದು. ಒಂದು ವೇಳೆ ಸೂಚನೆ ಮೀರಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.