ಬೆಂಗಳೂರು, ಡಿ. 24 (DaijiworldNews/HR): ಒಮಿಕ್ರಾನ್ ಭೀತಿ ನಡುವೆಯೇ ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 405 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 405 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಬಲಿಯಾಗಿದ್ದಾರೆ. ಇಂದು 267 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಸದ್ಯ 7251 ಸಕ್ರಿಯ ಪ್ರಕರಣಗಳಿವೆ.
ಇನ್ನು ಇಂದು ಸೋಂಕಿಗೆ ನಾಲ್ವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 38,201 ಜನರು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಇಂದು 254 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದು, 128 ಜನರು ಗುಣಮುಖರಾಗಿ ಬಿಡುಗಡೆಯಾಗಿ ಸದ್ಯ 5856 ಸಕ್ರಿಯ ಪ್ರಕರಣಗಳಿದೆ.