ಬೆಳಗಾವಿ, ಡಿ. 24 (DaijiworldNews/HR): ವಿಧಾನ ಪರಿಷತ್ನಲ್ಲಿ ನಡೆದ ಹೈಡ್ರಾಮಾದಿಂದ ಸಭಾಪತಿ ಬಸವರಾಜ ಹೊರಟ್ಟಿ ಬೇಸತ್ತು ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸಭಾಪತಿಗಳು ಬೇಸರಗೊಂಡು ರಾಜೀನಾಮೆ ಪತ್ರ ಸಿದ್ಧಪಡಿಸಿದ್ದು, ಪರಿಷತ್ ಕಲಾಪ ಮುಂದೂಡಿದ ನಂತರ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ ಎನ್ನಲಾಗಿದೆ.
ಇನ್ನು ಸಭಾಪತಿ ಹೊರಟ್ಟಿ ಅವರ ರಾಜೀನಾಮೆ ಬಗ್ಗೆ ಮಾಹಿತಿ ತಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್. ಪಾಟೀಲ್ ಮತ್ತು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಮನವೊಲಿಸಿದ ಬಳಿಕ ರಾಜೀನಾಮೆ ನಿರ್ಧಾರದಿಂದ ಹೊರಟ್ಟಿ ಹಿಂದೆ ಸರಿದರು ಎಂದು ಮೂಲಗಳು ತಿಳಿಸಿವೆ