ರಾಮನಗರ, ಡಿ. 24 (DaijiworldNews/HR): ಹೆಚ್.ಡಿ ಕುಮಾರಸ್ವಾಮಿ ಅವರು ಒಂದು ರೀತಿಯ ಸ್ಲೋ ಪಾಯಿಸನ್ ಇದ್ದ ಹಾಗೆ ಎಂದು ಮಾಗಡಿ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಜೆಡಿಎಸ್ ಪಕ್ಷಕ್ಕೆ ನೆಲೆ ಇಲ್ಲ. ಈಗಾಗಲೇ ಅನೇಕ ಶಾಸಕರು ಜೆಡಿಎಸ್ ಬಿಟ್ಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಶಾಸಕರು ಕಾಂಗ್ರೆಸ್ ಸೇರಲಿದ್ದು, ಪಕ್ಷದ ಮುಖಂಡರ ಏಳಿಗೆಯನ್ನು ಕುಮಾರಸ್ವಾಮಿ ಸಹಿಸುವುದಿಲ್ಲ.. ಅವರು ಒಂದು ರೀತಿಯ ಸ್ಲೋ ಪಾಯಿಸನ್ ಇದ್ದ ಹಾಗೆ" ಎಂದರು.
ಇನ್ನು "ಮುಂದಿನ ದಿನಗಳಲ್ಲಿ ಅನೇಕ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಶಾಸಕರಾದ ಪುಟ್ಟರಾಜು, ಶಿವಲಿಂಗೇಗೌಡ ಸೇರಿದಂತೆ ಹಲವು ಶಾಸಕರು ಪಕ್ಷ ಬಿಡುತ್ತಾರೆ ಎಂದು ಹೇಳಿದ್ದಾರೆ.