ನವದೆಹಲಿ, ಡಿ 24 (DaijiworldNews/MS): ಭಾರತದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 415ಕ್ಕೆ ಏರಿಕೆಯಾಗಿರುವುದಾಗಿ ವರದಿ ತಿಳಿಸಿದೆ. ಇದರಲ್ಲಿ ಈವರೆಗೆ 115 ಮಂದಿ ಸೋಂಕಿನಿಂದ ಗುಣಮುಖರಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಡಿಸೆಂಬರ್ 25) ಮಾಹಿತಿ ನೀಡಿದೆ.
ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ಭಾರತದಲ್ಲಿ7,189 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ . ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 77,032ಕ್ಕೆ ಇಳಿಕೆಯಾಗಿದೆ. ದೇಶದಲ್ಲಿ 24 ಗಂಟೆಯಲ್ಲಿ ಕೋವಿಡ್ ನಿಂದ 387 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,79,520ಕ್ಕೆ ಏರಿಕೆಯಾಗಿದೆ.