ಮಂಡ್ಯ, ಡಿ.25 (DaijiworldNews/PY): ಕ್ರಿಸ್ಮಸ್ ಆಚರಣೆ ಹೆಸರಿನಲ್ಲಿ ಮಕ್ಕಳನ್ನು ಕ್ರೈಸ್ತ ಧರ್ಮದತ್ತ ಸೆಳೆಯುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರು ಕಾನ್ವೆಂಟ್ ಮೇಲೆ ದಾಳಿ ನಡೆಸಿದ್ದು, ಅಲ್ಲದೇ, ಅಲ್ಲಿನ ಕ್ರಿಸ್ಮಸ್ ಆಚರಣೆಗೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಪಾಂಡವಪುರದ ನಿರ್ಮಲಾ ಕಾನ್ವೆಂಟ್ನಲ್ಲಿ ಮತಾಂತರ ಯತ್ನದ ಚಟುವಟಿಕೆ ನಡೆಯುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಕಾನ್ವೆಂಟ್ನಲ್ಲಿ ಕ್ರಿಸ್ಮಸ್ ಆಚರಣೆಗೆ ಹಾಜರಿರಬೇಕು ಎಂದು ಮಕ್ಕಳ ಮೇಲೆ ಒತ್ತಡ ಹೇರಲಾಗುತ್ತಿದೆ. ಕ್ರಿಸ್ಮಸ್ ನೆಪದಲ್ಲಿ ಮಕ್ಕಳನ್ನು ಕ್ರೈಸ್ತ ಧರ್ಮದತ್ತ ಆಕರ್ಷಿತರಾಗುವಂತೆ ಮಾಡಲಾಗುತ್ತಿದೆ. ಈ ಕಾರಣದಿಂದ ಮಕ್ಕಳ ನಡವಳಿಕೆಯಲ್ಲೂ ಬದಲಾವಣೆ ಕಂಡುಬರುತ್ತಿದೆ ಎಂದು ಕಾರ್ಯಕರ್ತರು ದೂರಿದ್ದಾರೆ.
ಶಾಲಾ-ಕಾಲೇಜುಗಳು ಧರ್ಮಾತೀತವಾಗಿರಬೇಕು. ನಿರ್ಮಲಾ ಕಾನ್ವೆಂಟ್ನಲ್ಲಿ ಕ್ರಿಸಮಸ್ ಆಚರಣೆಯ ಮೂಲಕ ಧರ್ಮಪ್ರಚಾರ ಮಾಡಲಾಗುತ್ತಿದೆ. ಕ್ರಿಸ್ಮಸ್ ಆಚರಿಸಬೇಕು ಎಂದು ಒತ್ತಾಯಿಸಿದರೆ ಹಿಂದೂ ದೇವರ ಫೋಟೋ ಸಹ ಹಾಕಿ ಎಂದು ಹಿಂದೂಪರ ಕಾರ್ಯಕರ್ತರು ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರನ್ನು ಒತ್ತಾಯಿಸಿದ್ದಾರೆ.