ಶ್ರೀನಗರ, ಡಿ. 25 (DaijiworldNews/HR): ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆ ಬೆಂಬಲಿತ ದಿ ರೆಸಿಸ್ಟೆನ್ಸ್ ಫ್ರಂಟ್ನ ಇಬ್ಬರು ಉಗ್ರರನ್ನು ಶ್ರೀನಗರದಲ್ಲಿ ಜಮ್ಮು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ನಡೆದ ನಾಗರಿಕರು ಮತ್ತು ಪೊಲೀಸರ ಹತ್ಯೆಗೆ ಈ ಇಬ್ಬರು ಉಗ್ರರು ಕಾರಣರಾಗಿದ್ದರು ಎನ್ನಲಾಗಿದೆ.
ಇನ್ನು ಪೊಲೀಸರ ಮಾಹಿತಿ ಪ್ರಕಾರ, ಶೋಫಿಯಾನ್ ನಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಕೂಡ ಮಾಡಲಾಗಿದ್ದು, ಶೋಪಿಯಾನದ ಚೌಗಾಮ್ ಪ್ರದೇಶದಲ್ಲಿ ಇಂದು ಬೆಳಗ್ಗಿನ ಜಾವ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿ ಬಳಿಕ ಭದ್ರತಾ ಪಡೆಯ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.