ಬೆಂಗಳೂರು, ಡಿ. 25 (DaijiworldNews/HR): ಕರ್ನಾಟಕದಲ್ಲಿ ಶನಿವಾರ 270 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 30,04,239 ಕ್ಕೆ ಏರಿಕೆಯಾಗಿದೆ. ನಾಲ್ವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 270 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಮೃತಪಟ್ಟು, ಇದುವರೆಗೆ 38,309 ಸೋಂಕಿತರು ಮೃತಪಟ್ಟಿದ್ದಾರೆ.
ಇನ್ನು ರಾಜ್ಯದಲ್ಲಿ 246 ಗುಣಮುಖರಾಗಿದ್ದು, ಪಾಸಿಟಿವಿಟಿ ದರ ಶೇಕಡ 0.27 ರಷ್ಟು ಇದೆ. ರಾಜ್ಯದಲ್ಲಿ 7271 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 152 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 126 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5890 ಸಕ್ರಿಯ ಪ್ರಕರಣಗಳು ಇವೆ.