ಬೆಂಗಳೂರು, ಡಿ. 26 (DaijiwoldNews/HR): ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರಕಾರವು ಭಾನುವಾರ ಆದೇಶ ಹೊರಡಿಸಿದೆ.
ಈ ಕುರಿತು ಸಚಿವ ಡಾ. ಸುಧಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಹೊಸ ವರ್ಷಾಚರಣೆ ವೇಳೆ ಕೊರೊನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.