ಹಾವೇರಿ, ಡಿ. 26 (DaijiwoldNews/HR): ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರ ರೂ.50 ಸಾವಿರ ಹಾಗೂ ರಾಜ್ಯ ಸರ್ಕಾರ ತಲಾ ರೂ. ಒಂದು ಲಕ್ಷ ಪರಿಹಾರ ನೀಡುವ ನಿರ್ಧಾರ ಕೈಗೊಂಡಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಡಿಸೆಂಬರ್ 2019ರಿಂದ ಆರಂಭವಾದ ಕೊರೊನಾ ಇನ್ನೂ ಮುಗಿದಲ್ಲ. ಸಂಕಷ್ಟ ಪರಿಸ್ಥಿತಿಯಲ್ಲಿ ಕೂಡ ಪ್ರಥಮವಾಗಿ ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ರಾಜ್ಯಾದ್ಯಂತ ಪರಿಹಾರ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ನಿಂದ 36 ಸಾವಿರ ಜನ ಮೃತಪಟ್ಟಿದ್ದಾರೆ" ಎಂದರು.
ಇನ್ನು ರಾಜ್ಯದ ಮುಖ್ಯಮಂತ್ರಿ ರೈತರ ಪರವಾಗಿದ್ದು, ಆರ್ಥಿಕ ಸಂಕಷ್ಟದಲ್ಲೂ ನೀರಾವರಿ ಕಾಮಗಾರಿಗಳು ಸ್ಥಗಿತಗೊಳ್ಳದಂತೆ ನೋಡಿಕೊಂಡಿದ್ದಾರೆ. ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ರೂ.206 ಕೋಟಿ ಮಂಜೂರು ಮಾಡಲಾಗಿದ್ದು, ಅತಿವೃಷ್ಟಿ ಮನೆಹಾನಿಗೆ ರೂ.ಐದು ಲಕ್ಷ ನೀಡಲಾಗುತ್ತಿದೆ" ಎಂದಿದ್ದಾರೆ.