ಬೆಂಗಳೂರು, ಡಿ. 26 (DaijiwoldNews/HR): ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಮುಂದಾಗಿರುವ ಕೇಂದ್ರ ಸರಕಾರದ ಯೋಜನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಈ ಮಾಹಿತಿ ಹಂಚಿಕೋಂಡಿರುವ ಅವರು, ಕೇಂದ್ರ ಸರಕಾರ ನಾನು ನೀಡಿದ ಸಲಹೆಯನ್ನು ಒಪ್ಪಿಕೊಂಡಿದೆ. ಕೋವಿಡ್ ನಿಯಂತ್ರಣದಲ್ಲಿ ಇದು ಸರಿಯಾದ ಹೆಜ್ಜೆ ಎಂದಿದ್ದಾರೆ.
ಕೊರೊನಾ ನಿಯಂತ್ರಣ ಕ್ರಮವಾಗಿ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೆ ರಾಹುಲ್ ಗಾಂಧಿ ಈ ಪ್ರತಿಕ್ರಿಯಿಸಿದ್ದು, ಲಸಿಕೆ ಹಾಗೂ ಬೂಸ್ಟರ್ ಡೋಸ್ ದೇಶದ ಪ್ರತಿಯೊಬ್ಬ ಪ್ರಜೆಯನ್ನು ಸುರಕ್ಷಿತವಾಗಿ ತಲುಪಬೇಕು ಎಂದೂ ನಾನು ಸಲಹೆ ನೀಡಿದ್ದೆ ಎಂದರು.