ಫಿರೋಜಾಬಾದ್, ಡಿ.26 (DaijiworldNews/PY): "ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ" ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವೈರಲ್ ಜ್ವರದಿಂದ ಫಿರೋಜಾಬಾದ್ನಲ್ಲಿ ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ 45-200 ಮಕ್ಕಳು ಮೃತಪಟ್ಟಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತದೆ. ಆದರೆ, ನೀವೇನಾದರೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದಲ್ಲಿ ಜಿಲ್ಲೆಯ ಹೆಸರಿನಿಂದಲೇ ಜಿಲ್ಲೆಗೆ ಜ್ವರಬಂದಿದೆ. ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಶೇ. 19ರಷ್ಟಿರುವ ಮುಸ್ಲಿಂ ಜನಸಂಖ್ಯೆಗೆ ಮತ ಚಲಾಯಿಸಿ. ತಮ್ಮದೇ ಆದ ರಾಜಕೀಯ ನಾಯಕತ್ವವನ್ನು ಆಯ್ಕೆ ಮಾಡುವ ಕುರಿತು ಸಭೆಯಲ್ಲಿ ತಿಳಿಸಿದ್ದಾರೆ.