ಮೊರಾದಾಬಾದ್, ಡಿ. 26 (DaijiwoldNews/HR): ಉತ್ತರ ಪ್ರದೇಶದ ಮೊರಾದಾಬಾದ್ನ ಗ್ರಾಮವೊಂದರಲ್ಲಿ 7 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಡಿಸೆಂಬರ್ 22ರಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ, ಮನೆಯ ಮುಂದೆ ಆಟವಾಡುತ್ತಿದ್ದಾಗ ಕಾಣೆಯಾಗಿದ್ದಳು. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ ಮೇರೆಗೆ ಎರಡು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಆದರೆ ಬಾಲಕಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಇನ್ನು ರೈತರೊಬ್ಬರು ತಮ್ಮ ಜಮೀನಿಗೆ ತೆರಳಿದಾಗ ಕೊಳೆತ ಶವದ ವಾಸನೆ ಬಂದಿದ್ದು, ಬಳಿಕ ಹುಡುಕಾಡಿದಾಗ ಬಾಲಕಿಯ ಮನೆಯಿಂದ 2 ಕಿ.ಮೀ ದೂರದಲ್ಲಿದ್ದ ಕಬ್ಬಿನ ಗದ್ದೆಯಲ್ಲಿ ಶವ ಬಿದ್ದಿರುವುದು ಶುಕ್ರವಾರ ರಾತ್ರಿ ಪತ್ತೆಯಾಗಿತ್ತು.
ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದ್ದು, ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದಾರೆ.