ಬೆಂಗಳೂರು, ಡಿ. 26 (DaijiwoldNews/HR): ನಾದ ಬ್ರಹ್ಮ ಹಂಸಲೇಖ ಅವರು ನೀಡಿರುವ ಹೇಳಿಕೆಯಲ್ಲಿ ಯಾವ ಅಪರಾಧವಿದೆ ? ಅವರು ವಾಸ್ತವಿಕ ನೆಲೆಗಟ್ಟಿನಲ್ಲಿ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಹಿತಿ ಡಾ.ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮಕಥೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಹಂಸಲೇಖ ವಾಸ್ತಿವಿಕ ನೆಲೆಗಟ್ಟಿನಲ್ಲಿ ಮಾತನಾಡಿದ್ದಾರೆ. ಅದರೂ ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಹಂಸಲೇಖ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ಪೇಜಾವರ ಶ್ರೀಗಳ ಬಗ್ಗೆ ಕಳೆದ ತಿಂಗಳು ಹಂಸಲೇಖ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಅವರು ಕ್ಷಮೆ ಯಾಚಿಸಿದ ನಂತರವೂ ಬಸವನಗುಡಿ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.