ಬೆಂಗಳೂರು, ಡಿ 27 (DaijiworldNews/MS): ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಿದ್ದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.
ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಹೀಗಾಗಿ ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವು ಇದೆ. ಮಠ ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಅವರ ಭಾಷಣದ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು.