ಲಕ್ನೋ, ಡಿ. 27 (DaijiworldNews/HR): ಪೊಲೀಸ್ ತನ್ನ ಮೇಲೆ ಕಳೆದ ಎರಡು ವರ್ಷಗಳಿಂದ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಪೊಲೀಸ್ ವಿರುದ್ಧ 28 ವರ್ಷದ ಮಹಿಳೆ ಎಫ್ಐಆರ್ ದಾಖಲಿಸಿದ್ದಾರೆ.
ಪೊಲೀಸ್ ಕಾನ್ಸ್ಟೆಬಲ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಳಿಕ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.
ಇನ್ನು ಎರಡು ವರ್ಷಗಳ ಹಿಂದೆ ಮಹಿಳೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಸ್ಥಳೀಯ ಯುವಕನ ವಿರುದ್ಧ ಮಹಿಳೆ ದೂರು ನೀಡಿದ್ದು, ತನ್ನನ್ನು ಪ್ರಶ್ನಿಸುವ ನೆಪದಲ್ಲಿ ಎರಡು ವರ್ಷಗಳ ಹಿಂದೆ ತನ್ನ ಮನೆಗೆ ಬರುತ್ತಿದ್ದ ಕಾನ್ಸ್ಟೇಬಲ್ ಮೊದಲು ಬಂದೂಕು ತೋರಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ.
ಮಹಿಳೆಯನ್ನು ಮದುವೆಯಾಗುವುದಾಗಿ ಕಾನ್ ಸ್ಟೇಬಲ್ ಭರವಸೆ ನೀಡಿದ್ದು, ಆಕೆ ಈ ಹಿಂದೆ ಯಾವುದೇ ದೂರು ದಾಖಲಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.