ಬೆಂಗಳೂರು,ಡಿ. 27 (DaijiworldNews/HR): ಕೊರೊನಾದಿಂದ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಆರೋಗ್ಯ ಮತ್ತು ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬ ಸದಸ್ಯರಿಗೆ 1 ಲಕ್ಷ ರೂ. ಪರಿಹಾರ ನೀಡುವ ಯೋಜನೆಗೆ 300 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಕೇಂದ್ರ ಸರ್ಕಾರದ ರೂ.50,000 ಗಳ ಪರಿಹಾರವನ್ನು ಡಿಬಿಟಿ ಮಾಡಲಾಗಿದೆ" ಎಂದರು.
ಇನ್ನು ಕೊರೊನಾ ಸಂದರ್ಭದಲ್ಲಿ ಆರೋಗ್ಯವಾಗಿದ್ದಂತಹ ಕುಟುಂಬದ ಸದಸ್ಯರು ಹಠಾತ್ತನೇ ಮೃತಪಟ್ಟಲ್ಲಿ ಬಹಳ ದು:ಖ ಕಾಡುತ್ತಿದ್ದು, ಈ ಸಾಂಕ್ರಾಮಿಕ ಬಹಳ ಕುಟುಂಬಗಳನ್ನು ಅನಾಥರನ್ನಾಗಿ ಮಾಡಿದೆ. ಆಧುನಿಕ ವೈದ್ಯಕೀಯ ಚಿಕಿತ್ಸೆಯ ಕಾಲಘಟ್ಟದಲ್ಲಿ ಕರೋನಾ ಸಾಂಕ್ರಾಮಿಕ ಯಾರು ಊಹಿಸಿರಲಾರದಂಥತ್ತು. ಅತಿ ಹೆಚ್ಚು ಸಂಖ್ಯೆಯ ಭಾರತ ದೇಶ ಕೋವಿಡ್ನ್ನು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಸಮರ್ಥವಾಗಿ ನಿರ್ವಹಿಸಿರುವುದು ಒಂದು ವಿಶ್ವ ದಾಖಲೆಯಾಗಿದೆ" ಎಂದು ಹೇಳಿದ್ದಾರೆ.