ಬೆಂಗಳೂರು, ಡಿ 28 (DaijiworldNews/MS): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಲವು ಸಚಿವರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪ್ರಯಾಣ ವಿಳಂಬವಾಗಿದೆ ಎಂದು ತಿಳಿದುಬಂದಿದೆ.
ಇಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಿಗದಿಯಾಗಿದ್ದು, ಅದರಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಿತ್ತು.ಆದರೆ ವಿಶೇಷ ವಿಮಾನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಟೆಕ್ ಆಫ್ ಆಗದೆ ಬಾಕಿಯಾಗಿದೆ.
ಆದರೆ ವಿಶೇಷ ವಿಮಾನದ ಬ್ಯಾಟರಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರಯಾಣ ವಿಳಂಬವಾಗಿದೆ. ಸದ್ಯ ಸಿಎಂ ಬೊಮ್ಮಾಯಿ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿಯೇ ಕಾದು ಕುಳಿತಿದ್ದಾರೆ.