ನವದೆಹಲಿ, ಡಿ 28 (DaijiworldNews/MS): ಕಾಂಗ್ರೆಸ್ ಪಕ್ಷದ 137 ನೇ ಸಂಸ್ಥಾಪನಾ ದಿನ ಅಂಗವಾಗಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಛೇರಿಯಲ್ಲಿ ಧ್ವಜಾರೋಹಣಕ್ಕೆ ಮುಂದಾದಾಗ ಕಾಂಗ್ರೆಸ್ ಪಕ್ಷದ ಧ್ವಜವು ದ್ವಜಸ್ತಂಭದಿಂದ ಕೆಳಕ್ಕೆ ಬಿದ್ದಿರುವ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದೆ.
ಸ್ತಂಭದಿಂದ ಕೆಳಕ್ಕೆ ಬಿದ್ದಿತು. ಧ್ವಜಾರೋಹಣ ಮಾಡಲಾಯಿತಾದರೂ ಅದನ್ನು ಹಾರಿಸಲು ಸಾಧ್ಯವಾಗಲಿಲ್ಲ.
ಸೋನಿಯಾ ಗಾಂಧಿ ದ್ವಜ ಹಾರಿಸಲು ಪ್ರಯತ್ನಿಸಿದಾಗ ಧ್ವಜವು ಕೆಳಗೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕೊನೆಗೆಪಕ್ಷದ ಖಜಾಂಚಿ ಪವನ್ ಬನ್ಸಾಲ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸೋನಿಯಾ ಗಾಂಧಿ ಅವರು ಪಕ್ಷದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಿದರು.ನಂತರ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪಕ್ಷದ ತ್ರಿವರ್ಣ ಧ್ವಜವನ್ನು ಹಾರಿಸಲು ಧ್ವಜಸ್ತಂಭವನ್ನು ಏರಿದರು.
ಪಕ್ಷದ ಕೇಂದ್ರ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭಾರತದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್ ಮಂಗಳವಾರ ತನ್ನ 137 ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿವೆ. 2014 ಮತ್ತು 2019ರ ಲೋಕಸಭೆ ಚುನಾವಣೆಗಳಲ್ಲಿ ಭಾರಿ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷವು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೆ ಪುಟಿದೇಳುವ ಪ್ರಯತ್ನಗಳನ್ನು ನಡೆಸುತ್ತಿದೆ.