ಹಾವೇರಿ, ಡಿ. 28 (DaijiworldNews/HR): ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ತಾಂಡಾದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಲ್ಲಿಯೊಂದು ಬಿದ್ದು 80ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ರಾಣೆಬೆನ್ನೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯಕ್ಕೆ ಎಲ್ಲ ಮಕ್ಕಳು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು ಧಾವಿಸಿ ಶಿಕ್ಷಕರ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿ ಶಿಕ್ಷಣ ಅಧಿಕಾರಿಗಳು ತಿಳಿಸಿದ್ದಾರೆ.