ಲಖ್ನೋ, ಡಿ. 28 (DaijiworldNews/HR): ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ವಾವಲಂಬಿ ಭಾರತವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ದೇಶದಲ್ಲಿ ಜಾರಿಗೆ ತರಲಾಗಿದ್ದು, ಇದು ರಾಜ್ಯದ ಯುವಕರಿಗೆ ಉತ್ತಮ ಭವಿಷ್ಯ ಒದಗಿಸಲಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸ್ವಾವಲಂಬಿ ಭಾರತದ ಪರಿಕಲ್ಪನೆಯನ್ನು ಅನುಷ್ಠಾನಕ್ಕೆ ತರಲು ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಇದು ರಾಜ್ಯಕ್ಕೆ ವರದಾನವಾಗಿದೆ. ಇವು ನಮ್ಮ ಯುವ ಜನಾಂಗಕ್ಕೆ ಮಾರ್ಗದರ್ಶನ ಮಾಡುತ್ತಿದ್ದು, ಭವಿಷ್ಯ ಉಜ್ವಲಗೊಳಿಸಲು ದಾರಿ ತೋರಿಸುತ್ತಿವೆ" ಎಂದರು.
ಇನ್ನು ಕಾನ್ಪುರದ ಐಐಟಿ ಸಂಸ್ಥೆಯು ರಾಜ್ಯ ಸರ್ಕಾರದೊಂದಿಗೆ ಸಹಕಾರ ನೀಡುತ್ತಿದ್ದು, ರಕ್ಷಣಾ ಉತ್ಪಾದನಾ ಕಾರಿಡಾರ್ಗೆ ತಾಂತ್ರಿಕ ಪಾಲುದಾರನಾಗಿ ನೆರವು ನೀಡುತ್ತಿದೆ ಎಂದು ಹೇಳಿದ್ದಾರೆ.