ಚಿತ್ರದುರ್ಗ, ಡಿ. 28 (DaijiworldNews/HR): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡಲಾಗುವುದು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗ್ ತಿರುಗೇಟು ನೀಡಿದ ಅವರು, ಒನಕೆ ಓಬವ್ವ ಜಯಂತಿ ಆಚರಿಸುವ ಬಸವರಾಜ ಬೊಮ್ಮಾಯಿ ಬೇಕೊ ಅಥವಾ ಟಿಪ್ಪು ಜಯಂತಿ ಮಾಡುವ ಸಿದ್ದರಾಮಯ್ಯ ಬೇಕೊ ಎಂಬುದನ್ನು ರಾಜ್ಯದ ಜನರು ತೀರ್ಮಾನಿಸಲಿದ್ದಾರೆ" ಎಂದರು
ಇನ್ನು "ಆಮಿಷಗಳನ್ನೊಡ್ಡಿ ಮತಾಂತರ ಮಾಡಬಾರದು ಎಂಬ ಕಾರಣಕ್ಕೆ ಸರ್ಕಾರ ಕಾಯ್ದೆ ರೂಪಿಸುತ್ತಿದೆ. ಕಾಯ್ದೆಯಿಂದ ಹಿಂದುಳಿದ ವರ್ಗಗಳಿಗೆ ಅನುಕೂಲವಾಗಲಿದೆ. ಬಲತ್ಕಾರದ ಮತಾಂತರಕ್ಕೆ ಕಡಿವಾಣ ಹಾಕುವುದು ತಪ್ಪಲ್ಲ. ಇದನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿರುವ ಸಿದ್ದರಾಮಯ್ಯ, ರಾಜ್ಯದ ಜನರಿಗೆ ಕೆಟ್ಟ ಸಂದೇಶ ನೀಡುತ್ತಿದ್ದಾರೆ" ಎಂದು ಹೇಳಿದ್ದಾರೆ.