ಶ್ರೀನಗರ, ಡಿ. 29 (DaijiworldNews/HR): ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಗುಂಡಿನ ದಾಳಿ ನಡೆದು ಓರ್ವ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಉಗ್ರಗಾಮಿಗಳು ದಕ್ಷಿಣ ಕಾಶ್ಮೀರ ಜಿಲ್ಲೆಯ ದೂರುವಿನ ನೌಗಾಮ್ ಶಹಾಬಾದ್ನಲ್ಲಿ ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಸೇನೆಯು ಶೋಧ ನಡೆಸುತ್ತಿದ್ದಂತೆ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.