ಬೆಂಗಳೂರು, ಡಿ.30 (DaijiworldNews/SM): ಮಹಾರಾಷ್ಟ್ರ ಏಕೀಕರಣ ಸಮಿತಿಯ ಉಪಟಳ ನಿಯಂತ್ರಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ವಾಪಸ್ ಪಡೆಯಲಾಗಿದೆ.
ಕನ್ನಡ ಪರ ಸಂಘಟನೆಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆ ಸಭೆ ನಡೆಸಿದ್ದು, ಮುಖ್ಯಮಂತ್ರಿಗಳ ಸಂಧಾನ ಫಲಪ್ರದವಾಗಿದೆ. ಕನ್ನಡ ಪರ ಸಂಘಟನೆಗಳ ಮುಖಂಡರ ಜೊತೆ ಮುಖ್ಯಮಂತ್ರಿ ಮಾತುಕತೆ ನಡೆಸಿದರು. ಹಾಗೂ ಕರ್ನಾಟಕ ಬಂದ್ ಹಿಂಪಡೆಯುವಂತೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಮುಖಂಡರು ನಾಳಿನ ಬಂದ್ ಹಿಂಪಡೆದಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಾಳಿನ ಬಂದ್ ವಾಪಸ್ ಪಡೆಯಲು ವಾಟಾಳ್ ನಾಗರಾಜ್ ಮತ್ತು ಸಾ. ರಾ. ಗೋವಿಂದ್ ಸ್ಪರ್ಧಿಸಿದ್ದು, ಅವರಿಗೆ ಧನ್ಯವಾದಗಳು ಎಂದರು.