ಬೆಂಗಳೂರು, ಡಿ.30 (DaijiworldNews/SM): ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಿಸುತ ನಿಟ್ಟಿನಲ್ಲಿ ಸರಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಈ ನಡುವೆ ಮಕ್ಕಳ ಲಸಿಕೆ ವಿಚಾರದ ಚರ್ಚೆ ನಡೆಯುತ್ತಿದ್ದು, 2022ರ ಜನವರಿ 3ರ ಸೋಮವಾರ ಲಸಿಕಾ ಅಭಿಯಾನ ಆರಂಭಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಇನ್ನು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಶಾಸಕರಿಗೆ ಪತ್ರ ಬರೆದಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಮಕ್ಕಳ ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡುವಂತೆ ಮನವಿ ಮಾಡಿದ್ದಾರೆ.
15 ರಿಂದ 18 ವರ್ಷದೊಳಗಿನ ಮಕ್ಕಳ ಕೋವಿಡ್ 19 ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕುರಿತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.