ನವದೆಹಲಿ, ಡಿ. 31 (DaijiworldNews/HR): ಭಾರತದಲ್ಲಿ ಓಮೈಕ್ರಾನ್ ಸೋಂಕು ದೃಢಪಟ್ಟಿರುವ ಒಟ್ಟು ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 450 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದೆ.
ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್ನಲ್ಲಿ 97 ಹಾಗೂ ಕರ್ನಾಟಕದಲ್ಲಿ 34 ಓಮೈಕ್ರಾನ್ ಪ್ರಕರಣಗಳಿದ್ದು, ಒಟ್ಟು ಓಮೈಕ್ರಾನ್ ಸೋಂಕಿತರ ಪೈಕಿ 374 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅಂತರದಲ್ಲಿ 16,746 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7,585 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದು, 91,361 ಸಕ್ರಿಯ ಪ್ರಕರಣಗಳಿವೆ.
ಕಳೆದ ಕಳೆದ 24 ಗಂಟೆಗಳಲ್ಲಿ ಚೇತರಿಕೆ ಪ್ರಮಾಣವು ಶೇಕಡ 98.36ರಷ್ಟಿದ್ದು, 47 ದಿನಗಳಿಂದ ಕೋವಿಡ್ ಪಾಸಿಟಿವಿಟಿ ದರ ಶೇಕಡ 1ಕ್ಕಿಂತ ಕಡಿಮೆ ಮಟ್ಟದಲ್ಲಿದೆ.