ಬೆಂಗಳೂರು, ಡಿ. 31 (DaijiworldNews/HR): ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಏನು ಮಾಡಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಾಸರಹಳ್ಳಿ ಕ್ಷೇತ್ರ ಜನಪರವಾಗಿದ್ದು, ಅಭಿವೃದ್ಧಿ ಆಗುವವರೆಗೂ ಹೋರಾಟ ಮಾಡುತ್ತೇನೆ. ದಾಸರಹಳ್ಳಿ ಕ್ಷೇತ್ರದ ಅನುದಾನ ತಾರತಮ್ಯದ ಬಗ್ಗೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರಲಾಗುವುದು" ಎಂದರು.
ದಾಸರಹಳ್ಳಿ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿ ಸಹಿಸದವರು ಪ್ರತಿಯೊಂದಕ್ಕೂ ಅಡ್ಡಿ ಮಾಡುತ್ತಿದ್ದು, ಜನರ ಪರವಾಗಿ ಹೋರಾಟ ಮಾಡುತ್ತೇನೆ. ಸಿಎಂ ಬಳಿ ಹೋಗಿ ಅನುದಾನ ನೀಡುವಂತೆ ಮನವಿ ಮಾಡುತ್ತೇನೆ. ಒಂದು ವೇಳೆ ರಾಜಕೀಯ ಮಾಡಿದರೆ ಧರಣಿ ಕೂರುತ್ತೇನೆ" ಎಂದಿದ್ದಾರೆ.
ಇನ್ನು "ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿರುವ ಬಗ್ಗೆ ಲಘುವಾಗಿ ಮಾತನಾಡುವುದಿಲ್ಲ. ನ್ಯಾಯಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ" ಎಂದು ಹೇಳಿದ್ದಾರೆ.