ಬೆಂಗಳೂರು, ಡಿ. 31 (DaijiworldNews/HR): ಕರ್ನಾಟಕದಲ್ಲಿ 23 ಹೊಸ ಓಮೈಕ್ರಾನ್ ಪ್ರಕರಣ ದೃಢಪಟ್ಟಿದ್ದು, ಹೊಸ ಪ್ರಕರಣಗಳ ಪೈಕಿ 19 ಜನರು ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ನಲ್ಲಿ ಮಾಹಿತಿ ನೀಡಿರುವ ಅವರು, ಇಂದು ರಾಜ್ಯದಲ್ಲಿ 23 ಹೊಸ ಓಮೈಕ್ರಾನ್ ಪ್ರಕರಣ ದೃಢಪಟ್ಟಿದ್ದು, ಇವುಗಳಲ್ಲಿ 19 ಅಂತರಾಷ್ಟ್ರೀಯ ಪ್ರಯಾಣಿಕರು ಅಮೆರಿಕ, ಯುರೋಪ್, ಆಫ್ರಿಕಾದಿಂದ ಪ್ರಯಾಣಿಸಿದವರಾಗಿದ್ದು, ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 66ಕ್ಕೆ ಏರಿಕೆಯಾಗಿದೆ" ಎಂದು ತಿಳಿಸಿದ್ದಾರೆ.
ಇನ್ನು ಕಳೆದ ಎರಡು ದಿನಗಳಿಂದ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂತಹ ಸಂದರ್ಭದಲ್ಲಿಯೇ 23 ಹೊಸ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.