ಶ್ರೀನಗರ,ಡಿ. 31 (DaijiworldNews/HR): ಪಂತಚೌಕ್ ಬಳಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದು, ಸಿಆರ್ಪಿಎಫ್ ಯೋಧ ಸೇರಿ ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ನಡೆದಿದೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಡೆದ ಪರಸ್ಪರ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.
ಇನ್ನು ಈ ಮೂವರಲ್ಲಿ ಒಬ್ಬನ ಗುರುತು ಪತ್ತೆಯಾಗಿದ್ದು, ಆತನನ್ನು ಜೈಶೆ-ಮೊಹಮ್ಮದ್ ಸಂಘಟನೆಯ ಸುಹೇಲ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದೆ.