ಬೆಂಗಳೂರು, ಡಿ. 31 (DaijiworldNews/SM): ದೇಶದಲ್ಲಿ ಕೋವಿಡ್ ಲಸಿಕಾ ಅಭಿಯಾನವನ್ನು ಮುಂದುವರೆಸಲಾಗಿದ್ದು, ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.
ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಬೂಸ್ಟರ್ ಡೋಸ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.
ಇತ್ತೀಚಿಗೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ನಿರ್ದೇಶಿಸಿದಂತೆ ಈ ಮಾರ್ಗಸೂಚಿಗಳನ್ನು ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.