ಬೆಂಗಳೂರು, ಜ.01 (DaijiworldNews/PY): "ಜನವರಿ 3ರಿಂದ ರಾಜ್ಯದಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜಿಲ್ಲಾಧಿಕಾರಿಗಳು, ಕೊರೊನಾ ಜಿಲ್ಲಾ ಉಸ್ತುವಾರಿಗಳು ಲಸಿಕಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ" ಎಂದಿದ್ದಾರೆ.
"ಜಿಲ್ಲಾಧಿಕಾರಿಗಳು ಸೇರಿದಂತೆ ಉಸ್ತುವಾರಿ ಸಚಿವರನ್ನು ಕೊರೊನಾ ಲಸಿಕಾ ಅಭಿಯಾನದಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದ್ಧೇನೆ. ಆಯಾ ಜಿಲ್ಲೆಗಳಲ್ಲಿ ಉಸ್ತುವಾರಿಗಳು ಭಾಗಿಯಾಗಲಿದ್ದಾರೆ" ಎಂದು ತಿಳಿಸಿದ್ದಾರೆ.
"ಜನವರಿ 3 ರಾಜ್ಯದ 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸುತ್ತೇವೆ" ಎಂದಿದ್ದಾರೆ.