ಬೆಂಗಳೂರು, ಜ.02 (DaijiworldNews/HR): "ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕವಿದ್ದು, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಸಚಿವರು, ಅಧಿಕಾರಿಗಳು ಕೆಲಸ ಮಾಡಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಕುರಿತು ಇಂದು ನಡೆದ ಸಭೆಯಲ್ಲಿ ಮಾತನಾದಿದ ಅವರು, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಸಚಿವರು, ಅಧಿಕಾರಿಗಳು ಕೆಲಸ ಮಾಡಬೇಕು. ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಇನ್ನು "ಕೊರೊನಾ ನಿಯಂತ್ರಣಕ್ಕೆ ಸಚಿವರು, ಅಧಿಕಾರಿಗಳು ಸೇರಿದಂತೆ ಪಕ್ಷಾತೀತವಾಗಿ ಎಲ್ಲರೂ ಸಹಕಾರ ನೀಡಬೇಕು. ಸಹಕಾರ ನೀಡಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ" ಎಂದು ಹೇಳಿದ್ದಾರೆ.