ಮೈಸೂರು, ಜ.02 (DaijiworldNews/PY): "ಕಾಂಗ್ರೆಸ್ ಅನ್ನು ಟೀಕಿಸಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಯಿಂದ ಸುಪಾರಿ ತೆಗೆದುಕೊಂಡಿದ್ದಾರೆಯೇ ಎನ್ನುವ ಪ್ರಶ್ನೆ ಮೂಡುತ್ತಿದೆ" ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಜೆಡಿಎಸ್ನ ಕೊಡುಗೆ ಏನು ಎನ್ನುವುದನ್ನು ಕುಮಾರಸ್ವಾಮಿ ಸ್ಪಷ್ಟಪಡಿಸಲಿ. ಕರ್ನಾಟಕದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ ಡಿ ದೇವೇಗೌಡ ಅವರ ಕೊಡುಗೆ ಅಗಣಿತ ಎಂದು ಹೆಚ್ಡಿಕೆ ಹೇಳಿದ್ದಾರೆ. ನಮಗೆ ದೇವೇಗೌಡರ ಬಗ್ಗೆ ಅಪಾರ ಗೌರವವಿದೆ. ಆದರೆ, ಕುಮಾರಸ್ವಾಮಿ ಅವರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಅವರು ಬಿಜೆಪಿಯೊಂದಿಗೆ ಸೇರಿಕೊಂಡು ಕಾಂಗ್ರೆಸ್ ಅನ್ನು ಟೀಕಿಸುತ್ತಿದ್ದಾರೆ" ಎಂದಿದ್ದಾರೆ.