ಚಾಮರಾಜನಗರ, ಜ.02 (DaijiworldNews/HR): ಸಚಿವ ಗೋವಿಂದ ಕಾರಜೋಳ ಅವರಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.
ಈ ಕುರಿತು ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮೇಕೆದಾಟು ಯೋಜನೆ ಹಾಗೂ ಕಾಂಗ್ರೆಸ್ಗೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳಿವೆ ಎಂದು ಕಾರಜೋಳ ಅವರು ಹೇಳಿದ್ದಾರೆ. ಹಾಗಾಗಿ ಅವರಲ್ಲಿ ಯಾವುದೇ ದಾಖಲೆಗಳಿದ್ದರೂ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ" ಎಂದರು.
'ಇನ್ನು 2018ರಲ್ಲೇ ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಕೇಂದ್ರ ಪರಿಸರ ಸಚಿವಾಲಯ ಅನುಮತಿ ಕೊಟ್ಟರೆ ಸಾಕು. ಆದರೆ,ಮೂರು ವರ್ಷಗಳಾದರೂ ಕೇಂದ್ರ ಅನುಮತಿ ಕೊಟ್ಟಿಲ್ಲ. ತಮಿಳುನಾಡಿನವರ ಮಾತು ಕೇಳಿಕೊಂಡು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.